ವಿಧಾನ ಪರಿಷತ್ ಉಪ-ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ನಾಮಪತ್ರ ಸಲ್ಲಿಕೆ

ಮಂಗಳೂರು : ಅ.21ರಂದು ನಡೆಯಲಿರುವ ವಿಧಾನ ಪರಿಷತ್‌ನ‌ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಕ್ಷೇತ್ರಕ್ಕೆ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಯ ವೇಳೆ ವಿಧಾನ‌ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜ, ಕಾಂಗ್ರೆಸ್ ಮುಖಂಡರಾದ ರಮಾನಾಥ ರೈ, ಜಯಪ್ರಕಾಶ್ ಹೆಗ್ಡೆ ಜೊತೆಗಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ರಾಜು ಪೂಜಾರಿ ಅವರು, ‘ಗ್ರಾ ಪಂ, ತಾಲ್ಲೂಕು ಪಂಚಾಯಿತಿ ಸದಸ್ಯನಾಗಿ ಕೆಲಸ ಮಾಡಿದ್ದೇನೆ. ಜಿಲ್ಲಾ ಪಂಚಾಯತ್ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ.‌ ಸ್ಥಳೀಯ ಸಂಸ್ಥೆಗಳ ಸಮಸ್ಯೆ ಅರಿವಿದೆ. ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳಿಗೆ ನನ್ನ ಕಾರ್ಯವೈಖರಿ ಬಗ್ಗೆ, ಪಂಚಾಯತ್ ರಾಜ್ ವ್ಯವಸ್ಥೆಯ ಕುರಿತು ನನಗಿರುವ ಜ್ಞಾನದ ಬಗ್ಗೆ ಗೊತ್ತಿದೆ. ಹೀಗಾಗಿ, ಮತದಾರರು ನನ್ನನ್ನು ಬೆಂಬಲಿಸುವ ವಿಶ್ವಾಸ ಇದೆ’ ಎಂದರು.

30 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ‌ ವಿವಿಧ ಜವಾಬ್ದಾರಿ ನಿರ್ವಹಿಸಿದ್ದೇನೆ. ಪಕ್ಷ ನಿಷ್ಠೆಯನ್ನು ಗುರುತಿಸಿ ಕಾಂಗ್ರೆಸ್, ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶವನ್ನು ನೀಡಿದೆ ಎಂದು ಅವರು ಹೇಳಿದರು.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ