ವಿಧಾನಪರಿಷತ್ ಉಪಚುನಾವಣೆ – ಬೈಂದೂರಿನ ರಾಜು ಪೂಜಾರಿ ಕಾಂಗ್ರೆಸ್ ಅಭ್ಯರ್ಥಿ

ಮಂಗಳೂರು : ಅಕ್ಟೋಬರ್ 21‌ರಂದು ನಡೆಯಲಿರುವ ವಿಧಾನಪರಿಷತ್ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಉಡುಪಿ ಜಿಲ್ಲೆಯ ಬೈಂದೂರಿನ ರಾಜು ಪೂಜಾರಿ ಅವರಿಗೆ ಟಿಕೆಟ್ ನೀಡಲಾಗಿದೆ.

ಕೋಟಾ ಶ್ರೀನಿವಾಸ ಪೂಜಾರಿ ಅವರು ಸಂಸದರಾದ ಬಳಿಕ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರಿಂದ ತೆರವಾಗಿರುವ ಸ್ಥಾನಕ್ಕೆ ಇದೀಗ ಉಪಚುನಾವಣೆ ನಡೆಯುತ್ತಿದೆ.

ಈ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ ಐದು ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕಮಾಂಡ್ ರಾಜು ಪೂಜಾರಿ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ.

ರಾಜು ಪೂಜಾರಿ ಅವರು ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿಯು ಕಾರ್ಯನಿರ್ವಹಿಸಿದ್ದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ