ಪೇಜಾವರ ಶ್ರೀಪಾದರ ಪೂರ್ವಾಶ್ರಮದ ಸಹೋದರ ವಿದ್ವಾನ್ ರಾಮಚಂದ್ರ ಭಟ್ ವಿಧಿವಶ

ಉಡುಪಿ : ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಪೂರ್ವಾಶ್ರಮದ ಸಹೋದರ ವಿದ್ವಾನ್ ಅಂಗಡಿಮಾರು ರಾಮಚಂದ್ರ ಭಟ್ಟ (72) ಅಲ್ಪಕಾಲದ ಅಸೌಖ್ಯದಿಂದ ಜುಲೈ 8ರ ರಾತ್ರಿ ತಾವು ವಾಸ್ತವ್ಯವಿದ್ದ ಇಲ್ಲಿನ ಪೇಜಾವರ ಮಠದ ಅತಿಥಿಗೃಹದಲ್ಲಿ ನಿಧನರಾದರು.

ಮೃತರು ಪತ್ನಿ, ಓರ್ವ ಪುತ್ರ, ಸಹೋದರ ಸಹೋದರಿಯರು ಹಾಗೂ ಅನೇಕ ಮಂದಿ ಶಿಷ್ಯರನ್ನು ಅಗಲಿದ್ದಾರೆ.

ಜ್ಯೋತಿಷ್ಯ, ವೇದ ವೇದಾಂತ ಶಾಸ್ತ್ರಗಳಲ್ಲಿ ಪಾರಂಗತರಾಗಿದ್ದ ರಾಮಚಂದ್ರ ಭಟ್, ಮುಂಬಯಿ ಅದಮಾರು ಮಠದ ಶಾಖೆಯ ವ್ಯವಸ್ಥಾಪಕರಾಗಿ ಅನೇಕ ವರ್ಷ ಸೇವೆ ಸಲ್ಲಿಸಿದ್ದರು.

ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಐದನೇ ಪರ್ಯಾಯ ಅವಧಿಯಲ್ಲಿ ಶ್ರೀಕೃಷ್ಣ ಮಠದ ಸಹ ದಿವಾನರಾಗಿಯೂ ಸೇವೆ ಸಲ್ಲಿಸಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ