ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪುರ : ರಾಜ್ಯ ಯೋಜನಾ ನಿರ್ದೇಶಕರ ಕಚೇರಿ ಬೆಂಗಳೂರು ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ನಡೆಸಿದ ಕುಂದಾಪುರ ತಾಲೂಕು ಮಟ್ಟದ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾವ್ಯ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ರಸ ಪ್ರಶ್ನೆ ಸ್ಪರ್ಧೆಯಲ್ಲಿ ಶ್ರೇಯಸ್ ಮತ್ತು ಮನ್ವಿತ್ ತೃತೀಯ ಸ್ಥಾನ ಪಡೆದಿದ್ದಾರೆ. ಶಾಲೆಯಲ್ಲಿ ನಿರಂತರವಾಗಿ ನಡೆಯುವ ಪಠ್ಯೇತರ ಚಟುವಟಿಕೆಗಳು, ಸಾಂಸ್ಕೃತಿಕ ಸ್ಪರ್ಧೆಗಳು ಮಕ್ಕಳ ಸ್ರಜನಶೀಲ ಚಿಂತನೆಗೆ, ಕ್ರೀಯಾಶೀಲತೆಗೆ ಸಹಕಾರಿಯಾಗಿದೆ.

ವಿಜೇತ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿಗಳಾದ ಭರತ್ ಶೆಟ್ಟಿ, ಮುಖ್ಯ ಶಿಕ್ಷಕ ಪ್ರದೀಪ್, ಶಿಕ್ಷಕ ವೃಂದ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ