ಶ್ರಮದಾನದ ಮೂಲಕ ರಸ್ತೆಯ ಹೊಂಡ ಮುಚ್ಚಿದ ಗ್ರಾಮಸ್ಥರು

ಉಡುಪಿ : ರಾಂಪುರ ಸರ್ಕಲ್‌ನಿಂದ ಮೂಡುಬೆಳ್ಳೆ ಮಾರ್ಗದ ಪಡುಅಲೆವೂರು ಸೇತುವೆಯ ಬಳಿ ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ಸಾಕಷ್ಟು ತೊಂದರೆಯಾಗಿದೆ. ಸಂಬಂಧಪಟ್ಟ ಇಲಾಖೆ ಹಾಗೂ ಜನಪ್ರತಿನಿಧಿಗಳು ಯಾವುದೇ ಸ್ಪಂದನೆ ನೀಡುತ್ತಿಲ್ಲ. ಹೀಗಾಗಿ ಅಲೆವೂರು ಯುವಕ ಸಂಘದ ನೇತೃತ್ವದಲ್ಲಿ ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಶ್ರಮದಾನದ ಮೂಲಕ ಹೊಂಡಗಳಿಗೆ ಮಣ್ಣುಹಾಕಿ ಮುಚ್ಚುವ ಕಾರ್ಯ ಮಾಡಿದ್ದಾರೆ.

ರಸ್ತೆಯಲ್ಲಿ ದೊಡ್ಡ ಹೊಂಡಗಳು ಬಿದ್ದಿದ್ದು, ದ್ವಿಚಕ್ರ ವಾಹನ ಸವಾರರು ಪ್ರಾಣ ಕೈಯಲ್ಲಿ ಹಿಡಿದುಕೊಂಡು ಸಂಚರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಸಂಬಂಧಪಟ್ಟವರಿಗೆ ಹಾಗೂ ಜನಪ್ರತಿನಿಧಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ಅಲೆವೂರು ಯುವಕ ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಸೇರಿಕೊಂಡು ತಾತ್ಕಾಲಿಕವಾಗಿ ಹೊಂಡ ಮುಚ್ಚುವ ಕೆಲಸ ಮಾಡಿದ್ದಾರೆ‌. ಇನ್ನಾದರೂ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆಯನ್ನು ದುರಸ್ತಿ ಮಾಡುವ ಕೆಲಸ ಮಾಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ