ಬಡಾನಿಡಿಯೂರು ಗ್ರಾಪಂ ಕಚೇರಿಗೆ ಬೀಗ ಜಡಿದು ಪಿಡಿಓ ವಿರುದ್ಧ ಗ್ರಾಮಸ್ಥರ ಆಕ್ರೋಶ

ಉಡುಪಿ : ಬಡಾನಿಡಿಯೂರು ಗ್ರಾಮ ಪಂಚಾಯತ್ ಕಚೇರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿದ ಘಟನೆ ನಡೆದಿದೆ. ಪಂಚಾಯತ್ ಕಚೇರಿಗೆ ಬೀಗ ಜಡಿದು ಪಿಡಿಓ ಮಾಲತಿ ಅವರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಬಡಾನಿಡಿಯೂರು ಗ್ರಾಪಂನಲ್ಲಿ ಕಳೆದ 6 ವರ್ಷದಿಂದ ಸೇವೆ ಸಲ್ಲಿಸಿ ಸರಕಾರದ ಆದೇಶದಂತೆ ವರ್ಗಾವಣೆಗೊಂಡ ಪಿಡಿಓ ಮಾಲತಿ ಅವರು, ಕೋರ್ಟ್ ಮೊರೆ ಹೋಗಿ ಮತ್ತೆ ಅದೇ ಗ್ರಾ. ಪಂ.ಗೆ ವಾಪಸು ವರ್ಗಾವಣೆ ಮಾಡಿಕೊಂಡು ಅಧಿಕಾರ ವಹಿಸಲು ಮುಂದಾಗಿದ್ದಾರೆ. ಇದರ ವಿರುದ್ಧ ಗ್ರಾಮಸ್ಥರು ಪಕ್ಷಬೇಧ ಮರೆತು ಪ್ರತಿಭಟನೆ ನಡೆಸಿದರು.

ಪಂಚಾಯತ್ ಉಪಾಧ್ಯಕ್ಷ ಗಿರೀಶ್ ಸಾಲ್ಯಾನ್ ಮಾತನಾಡಿ, ಗ್ರಾಮದ ಯಾವುದೇ ಕೆಲಸಗಳು ನಡೆಯದ ಹಿನ್ನಲೆಯಲ್ಲಿ ಪಿಡಿಒ ಮಾಲತಿ ಬಗ್ಗೆ ಗ್ರಾಮಸ್ಥರ ವಿರೋಧವಿದೆ. ಅವರು ಜನಪರವಾಗಿ ಇರಲಿಲ್ಲ, ಜನವಿರೋಧಿ ನೀತಿಯನ್ನು ಅನುಸರಿಸುವ ಪಿಡಿಒ ನಮಗೆ ಬೇಡ ಎಂದು ಹೇಳಿದರು. ಸ್ಥಳಕ್ಕೆ ಆಗಮಿಸಿದ ಶಾಸಕ ಯಶ್ಪಾಲ್ ಎ. ಸುವರ್ಣ ಅವರು ಸಮಸ್ಯೆ ಬಗೆಹರಿಸುವುದಾಗಿ ಹೇಳಿದರು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ