ಮೆಹಂದಿ ಕಾರ್ಯಕ್ರಮದಲ್ಲಿ ನಿಯಮ ಉಲ್ಲಂಘಿಸಿ ಧ್ವನಿವರ್ಧಕ ಬಳಕೆ – ದೂರು ದಾಖಲು

ಮಲ್ಪೆ : ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಕಲ್ಮಾಡಿ ಎಂಬಲ್ಲಿ ನಿಯಮ ಉಲ್ಲಂಘಿಸಿ ತಡರಾತ್ರಿಯವರೆಗೆ ಡಿ.ಜೆ ಸೌಂಡ್‌ ಬಳಸಿದವರ ವಿರುದ್ಧ ಮಲ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಯ ಎಂಬವರ ಮನೆಯಲ್ಲಿ ಅವರ ಮಗ ರಂಜಿತ್‌ ಎಂಬವರ ಮೆಹಂದಿ ಕಾರ್ಯಕ್ರಮ ನಡೆಯುತ್ತಿತ್ತು. ಧ್ವನಿವರ್ಧಕ ಬಳಸಲು ಅನುಮತಿ ಪಡೆಯದೇ ಕಾರ್ಯಕ್ರಮ ನಡೆಸಿ, ಸಾರ್ವಜನಿಕರ ನೆಮ್ಮದಿಗೆ ಭಂಗವನ್ನುಂಟುಮಾಡಿದ ರಂಜಿತ್‌ ಹಾಗೂ ಸುಶಾನ್‌ ಸೌಂಡ್‌ ಸಿಸ್ಟಮ್‌ ವಿರುದ್ಧ ಮಲ್ಪೆ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 54/2025 ಕಲಂ:292 BNS ಮತ್ತು 109 KP Act ರಂತೆ ಪ್ರಕರಣ ದಾಖಲಾಗಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ