ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿಂದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ, ದೇವರ ದರ್ಶನ

ಉಚ್ಚಿಲ : ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ಇಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ದೇವಳಕ್ಕೆ ಆಗಮಿಸಿದ ಅವರನ್ನು ಆಡಳಿತ ಮಂಡಳಿ ವತಿಯಿಂದ ಪೂರ್ಣ ಕುಂಭದೊಂದಿಗೆ ಬರಮಾಡಿಕೊಳ್ಳಲಾಯಿತು. ಬಳಿಕ ನಾಡೋಜ ಡಾ. ಜಿ. ಶಂಕರ್ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಅಧ್ಯಕ್ಷರಾದ ಗಿರಿಧರ್ ಸುವರ್ಣ, ಮನೋಹರ್ ಶೆಟ್ಟಿ ಸಾಯಿರಾಧ, ಸಂತೋಷ್ ಶೆಟ್ಟಿ ತೆಂಕರಗುತ್ತು, ಯೋಗೀಶ್ ಶೆಟ್ಟಿ ಕಾಪು, ಶೋಭಿತ್ ಶೆಟ್ಟಿ, ಉಮೇಶ್ ಶೆಟ್ಟಿ, ಮೋಹನ್ ಬಂಗೇರ ಕಾಪು, ದಿನೇಶ್ ಎರ್ಮಾಳ್, ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ, ರಾಘವೇಂದ್ರ ಸುವರ್ಣ ಬೈಕಾಡಿ ಮೊದಲಾದವರು ಉಪಸ್ಥಿತರಿದ್ದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ