ಆನೆಗುಡ್ಡೆ ಶ್ರೀ ವಿನಾಯಕ ದೇಗುಲಕ್ಕೆ ಭೇಟಿ ನೀಡಿದ ವಿ. ವಿ. ಎಸ್. ಲಕ್ಷ್ಮಣ್‌

ಕುಂಭಾಶಿ : ಕುಂಭಾಶಿಯ ಆನೆಗುಡ್ಡೆ ಶ್ರೀ ವಿನಾಯಕ ದೇಗುಲಕ್ಕೆ ಹೈದರಾಬಾದ್‌ನ, ಶ್ರೇಷ್ಠ ಕ್ರಿಕೆಟಿಗ ವಿ. ವಿ. ಎಸ್. ಲಕ್ಷ್ಮಣ್‌ ಹಾಗೂ ಕುಟುಂಬದವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ದೇಗುಲದ ಆಡಳಿತ ಧರ್ಮದರ್ಶಿಗಳಾದ ಶ್ರೀಯುತ ಕೆ. ಶ್ರೀರಮಣ ಉಪಾಧ್ಯಾಯರು ವಿ. ವಿ. ಎಸ್. ಲಕ್ಷ್ಮಣ್‌ರವರನ್ನು ಸ್ವಾಗತಿಸಿ ಗೌರವಿಸಿದರು. ಪರ್ಯಾಯ ಅರ್ಚಕ ಶ್ರೀ ಕೆ. ಕೃಷ್ಣಾನಂದ ಉಪಾಧ್ಯಾಯ ಸಹೋದರರು ದೇವರ ಪ್ರಸಾದ ನೀಡಿ ಆಶೀರ್ವದಿಸಿದರು. ವ್ಯವಸ್ಥಾಪಕ ನಟೇಶ್ ಕಾರಂತ್ ಹಾಗೂ ದೇಗುಲದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

60 ಲಕ್ಷ ವೆಚ್ಚದಲ್ಲಿ ಹೆರ್ಗ ಮಾರುತಿ ನಗರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ

ಎ.6 ಬಿಜೆಪಿ ಸ್ಥಾಪನಾ ದಿನಾಚರಣೆ, ಎ.10 ಉಡುಪಿಯಲ್ಲಿ ಜನಾಕ್ರೋಶ ಯಾತ್ರೆ

ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷರೊಂದಿಗೆ ರಂಗಾಸಕ್ತರ ಸಂವಾದ