4ಲಕ್ಷ ಹಣ ಲಂಚ ಸ್ವೀಕರಿಸುತ್ತಿದ್ದಾಗಲೇ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ

ಮಂಗಳೂರು : ಆಸ್ತಿ ಪಹಣಿಯಲ್ಲಿ ವಾರಸುದಾರರ ಹೆಸರು ಸೇರ್ಪಡೆ ಮಾಡಲು 4ಲಕ್ಷ ರೂ‌. ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಮುಲ್ಕಿ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.

ಪಿರ್ಯಾದಿದಾರರು ತಮ್ಮ ಮೃತಪಟ್ಟ ಅಜ್ಜಿಯ ಹೆಸರಿನಲ್ಲಿದ್ದ ಆಸ್ತಿಯ ಪಹಣಿಯಲ್ಲಿ ವಾರಸುದಾರರ ಹೆಸರನ್ನು ಸೇರ್ಪಡೆ ಮಾಡಲು ಕಳೆದ ವರ್ಷ ಮುಲ್ಕಿ ತಾಲೂಕು ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಮುಲ್ಕಿ ಕಂದಾಯ ನಿರೀಕ್ಷಕರ ಕಚೇರಿಗೆ ವಿಚಾರಣೆಗಾಗಿ ಕಳುಹಿಸಲಾಗಿತ್ತು. ಈ ಅರ್ಜಿಯನ್ನು ಮುಲ್ಕಿ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್ ಒಂದು ವರ್ಷಕ್ಕಿಂತ ಅಧಿಕ ಕಾಲ ಯಾವುದೇ ಕ್ರಮ ಕೈಗೊಳ್ಳದೇ ಬಾಕಿ ಇರಿಸಿಕೊಂಡಿದ್ದನು. ಪಿರ್ಯಾದಿದಾರರು ಡಿಸೆಂಬರ್ 9ರಂದು ಕಂದಾಯ ನಿರೀಕ್ಷಕರ ಕಚೇರಿಗೆ ಹೋಗಿ ಈ ಬಗ್ಗೆ ವಿಚಾರಿಸಿದ್ದಾರೆ.

ಆಗ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್ ರವರು ಆಸ್ತಿಗೆ ಸಂಬಂಧಿಸಿದ ಪಹಣಿಯಲ್ಲಿ ವಾರಸುದಾರರ ಹೆಸರು ಸೇರ್ಪಡೆಗೆ 4 ಲಕ್ಷ ರೂ. ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಆದ್ದರಿಂದ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ಪಿರ್ಯಾದಿದಾರರು ದೂರು ನೀಡಿದ್ದಾರೆ.

ಡಿಸೆಂಬರ್ 19ರಂದು ಬೆಳಗ್ಗೆ ಮುಲ್ಕಿಯ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್, ಸುರತ್ಕಲ್ ಜಂಕ್ಷನ್ ಬಳಿ ಪಿರ್ಯಾದಿದಾರರಿಂದ 4 ಲಕ್ಷ ರೂ. ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಸದರಿ ಅಧಿಕಾರಿಯನ್ನು ವಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗಿರುತ್ತದೆ.

Related posts

ಅಕ್ರಮವಾಗಿ ಸಾಗಿಸುತ್ತಿದ್ದ 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ;

ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

ದ್ವಿತೀಯ ಹಂತದ ಚಿತ್ರೀಕರಣ ಪೂರೈಸಿದ “ಪಿಲಿಪಂಜ”