ಹೊಳೆ ದಾಟುತ್ತಿದ್ದ ವೇಳೆ ಹಗ್ಗ ತುಂಡಾಗಿ ನೀರಿನಲ್ಲಿ ಕೊಚ್ಚಿ ಹೋದ ಕಾರ್ಮಿಕ

ಉಡುಪಿ : ಕೂಲಿ ಕಾರ್ಮಿಕನೋರ್ವ ಹೊಳೆನೀರಿನಲ್ಲಿ ಕೊಚ್ಚಿಕೊಂಡು ಹೋದ ಘಟನೆ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಚೀರೊಳ್ಳಿ ಎಂಬಲ್ಲಿ ನಡೆದಿದೆ.

ಕೂಲಿ ಕಾರ್ಮಿಕನ್ನು ತುಮಕೂರು ಮೂಲದ ಆನಂದ್ (45) ಎಂದು ಗುರುತಿಸಲಾಗಿದೆ. ಇವರು ಕೆಲಸ ಮಾಡುವ ಮನೆಗೆ ತೆರಳಲು ಸೀತಾನದಿಯ ಉಪನದಿಯನ್ನು ದಾಟಿ ಹೋಗಬೇಕಿತ್ತು. ಹಗ್ಗದ ಸಹಾಯದಿಂದ ಹೊಳೆ ದಾಟುತ್ತಿದ್ದಾಗ ಹಗ್ಗ ತುಂಡಾಗಿ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ ಎನ್ನಲಾಗಿದೆ.

ಇವರು ನಾಡ್ಪಾಲಿನ ಮನೋರಮಾ ಹೆಗ್ಡೆ ಎಂಬವರಿಗೆ ಸೇರಿದ ತೋಟದಲ್ಲಿ ಕಳೆದ ಹಲವಾರು ವರ್ಷಗಳಿಂದ ದುಡಿಯುತ್ತಿದ್ದರು. ತೋಟದ ಮನೆಯಿಂದ ಹೊಳೆ ದಾಟಿ ಬರಲು ಕಾಲುಸೇತುವೆ ಸಹಿತ ಯಾವುದೇ ಮೂಲ ಸೌಕರ್ಯವನ್ನು ಈ ತನಕ ಕಲ್ಪಿಸಲಾಗಿಲ್ಲ. ಹಾಗಾಗಿ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಹೆಬ್ರಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮಹೇಶ್ ಟಿಎಂ ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ