ಮೆಸ್ಕಾಂ ಸಿಬ್ಬಂದಿಗಳ ಕಾರ್ಯವೈಕರಿಗೆ ವ್ಯಾಪಕ ಪ್ರಶಂಸೆ

ಉಡುಪಿ : ಭಾರಿ ಮಳೆಯ ನಡುವೆಯೂ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಮೆಸ್ಕಾಂ ಸಿಬ್ಬಂದಿಗಳ ಕಾರ್ಯವೈಕರಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಮೆಸ್ಕಾಂ ಸಿಬಂದಿಗಳು ಭಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಮರದ ಕೊಂಬೆಗಳನ್ನು ತೆರವು ಮಾಡುವುದು, ವಿದ್ಯುತ್ ಸಂಪರ್ಕವನ್ನು ಪುನಃ ಸ್ಥಾಪಿಸುವ ಕೆಲಸದಲ್ಲಿ ತೊಡಗಿದ್ದಾರೆ.

ಈ ಕಾರ್ಯಾಚರಣೆಯ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಮೆಚ್ಚುಗೆ ಪಡೆಯುತ್ತಿದೆ.

ವಿಡಿಯೋಗಳನ್ನು ನೋಡಿದ ಜನರು ಮೆಸ್ಕಾಂ ಸಿಬ್ಬಂದಿಗಳ ಧೈರ್ಯ ಮತ್ತು ಸೇವಾ ಮನೋಭಾವಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ