ವ್ಯಾಪಕ ಮಳೆ : ಇಂದು ಬೈಂದೂರು, ಕುಂದಾಪುರ ಹಾಗೂ ಬ್ರಹ್ಮಾವರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಬೈಂದೂರು, ಕುಂದಾಪುರ ತಾಲೂಕಿನಲ್ಲಿ ಭಾರೀ ವರ್ಷಧಾರೆ ಆಗುತ್ತಿದ್ದು, ನೆರೆ ಭೀತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಇಂದು(ಜುಲೈ 5) ರಜೆ ಘೋಷಿಸಲಾಗಿದೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ. ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.

ಭಾರೀ ಗಾಳಿಮಳೆಗೆ ತಾಲೂಕಿನಾದ್ಯಂತ ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಮಳೆ ಮುಂದುವರಿಯುವ ಸಾಧ್ಯತೆ ಇರುವ ಕಾರಣ ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ ಎಸ್.ಆರ್. ರಜೆ ಘೋಷಿಸಿ ಆದೇಶ ನೀಡಿದ್ದಾರೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ