ದ್ವಿಚಕ್ರ ವಾಹನ ಸವಾರನ ಮೇಲೆ ಕಾಡುಹಂದಿ ದಾಳಿ: ಯುವಕಗೆ ತೀವ್ರ ಗಾಯ

ಮಂಗಳೂರು : ದ್ವಿಚಕ್ರ ವಾಹನ ಸವಾರನೋರ್ವನ ಮೇಲೆ ಕಾಡು ಹಂದಿಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಮಂಗಳವಾರ ಮುಂಜಾನೆ ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ ಮಣ್ಣಾಪು ಎಂಬಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಧನುಷ್(30) ಗಾಯಗೊಂಡವರು.

ಕುಂಬ್ರ ಪೆಟ್ರೋಲ್ ಬಂಕ್‌ನಲ್ಲಿ ಮ್ಯಾನೇಜರ್ ಆಗಿರುವ ಧನುಷ್ ಎಂದಿನಂತೆ ಇಂದು ಬೆಳಗ್ಗೆ ಸ್ಕೂಟರ್‌ನಲ್ಲಿ ಪೆಟ್ರೋಲ್ ಬಂಕ್‌ಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕುರುಂಜ ಮಣ್ಣಾಪು ತಲುಪಿದಾಗ ಏಕಾಏಕಿ ಕಾಡು ಹಂದಿಯೊಂದು ಧನುಷ್ ಚಲಾಯಿಸುತ್ತಿದ್ದ ಸ್ಕೂಟರ್ ಮೇಲೆ ಎರಗಿದೆ. ಈ ವೇಳೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಧನುಷ್ ಮೇಲೆ ಎರಗಿದ ಕಾಡುಹಂದಿ, ಅವರ ಬಲ ಕೈಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ. ಅಲ್ಲದೆ, ಇತರ ದೇಹದ ಭಾಗಗಳಿಗೆ ಗಾಯಗೊಳಿಸಿದೆ. ಗಾಯಾಳುವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಉಡುಪಿ ಜಿಲ್ಲೆಯಲ್ಲಿ ಉಪವಾಸ, ಧ್ಯಾನದೊಂದಿಗೆ ಗುಡ್ ಫ್ರೈಡೆ ಆಚರಣೆ

ಬಿಎಸ್‌ಎನ್‌ಎಲ್ ಸಂಪರ್ಕದ ಕುಂದು ಕೊರತೆ, ಗುಣಮಟ್ಟ ಉತ್ತಮಗೊಳಿಸುವಿಕೆ ಸಭೆಯಲ್ಲಿ ಸಂಸದ ಕೋಟ ಭಾಗಿ

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ