ಜಮೀರ್ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ಹಾಕ್ತೇನೆ – ಟಿ.ಜೆ.ಅಬ್ರಹಾಂ

ಉಡುಪಿ : ಸಚಿವ ಜಮೀರ್ ಹೈಕೋರ್ಟ್ ತೀರ್ಪು ಬಗ್ಗೆ ಮಾತನಾಡುವುದು ಅಂದರೆ ಹುಡುಗಾಟನಾ? ರಾಜಕಾರಣದಲ್ಲಿ ಭಾಷಣ ಬಿಗಿದ ಹಾಗೆ ಮಾತನಾಡಿದರೆ ಆಗುತ್ತಾ? ನಾಲಿಗೆ ಬಿಗಿಯಿಲ್ಲದೆ ಮಾತನಾಡಿದ್ದು ಸರಿಯಲ್ಲ. ಈ ತೀರ್ಪನ್ನು ಪೊಲಿಟಿಕಲ್ ಆದೇಶ ಎಂದು ಹೇಳುತ್ತಾರೆ. ಅವರ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸುವೆ ಎಂದು ಹಿರಿಯ ವಕೀಲ, ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಗುಡುಗಿದ್ದಾರೆ.

ಸಿಎಂ ಕುರಿತ ಹೈಕೋರ್ಟ್ ತೀರ್ಪು ರಾಜಕೀಯಪ್ರೇರಿತ ತೀರ್ಪು ಎಂಬ ಸಚಿವ ಜಮೀರ್ ಹೇಳಿಕೆಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನ್ಯಾಯಾಧೀಶರನ್ನು ರಾಜಕಾರಣಿಗಳ ಲೆವೆಲ್ಲಿಗೆ ಇಳಿಸುತ್ತೀರಾ? ನ್ಯಾಯಾಲಯದ ಬಗ್ಗೆ ಭಯ ಭಕ್ತಿ ಬೇಡ್ವಾ?
ಯಾರ ಬಗ್ಗೆ ಮಾತನಾಡುತ್ತಿದ್ದೀರಿ ಗೊತ್ತಿದೆಯಾ? ಜಮೀರ್ ನಾಲಿಗೆ ಹರಿಯ ಬಿಟ್ಟಿದ್ದಾರೆ. ಟ್ರಾನ್ಸ್‌ಪೋರ್ಟ್ ಸಿಬ್ಬಂದಿಗಳ ಹತ್ತಿರ ಮಾತನಾಡಿದ ಹಾಗೆ ಮಾತನಾಡಿದ್ದಾರೆ. ನನ್ನ ಬಗ್ಗೆ ಮಾತನಾಡಿ ಪರ್ವಾಗಿಲ್ಲ. ನ್ಯಾಯಾಲಯದ ಬಗ್ಗೆ ಈ ರೀತಿ ಮಾತನಾಡಬೇಡಿ. ನಿಮಗೆ ನ್ಯಾಯಾಲಯದ ಬಗ್ಗೆ ಭಯ ಬರಬೇಕು, ನಾಳೆ ನಿಮ್ಮ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುತ್ತೇನೆ ಎಂದು ಹೇಳಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ