ಮೀನು ಕದ್ದ ಆರೋಪದಲ್ಲಿ ಮಹಿಳೆ ಮೇಲೆ ಹಲ್ಲೆ ಪ್ರಕರಣ : ಪ್ರತಿಭಟನಾ ಸಭೆಯಲ್ಲಿ ಗದ್ದಲ, ರಾಜಕೀಯ ಭಾಷಣಕ್ಕೆ ವಿರೋಧ

ಉಡುಪಿ : ಮಲ್ಪೆ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಪ್ರತಿಭಟನಾ ಸಭೆಯಲ್ಲಿ ಗದ್ದಲ ಉಂಟಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಅವರು ಭಾಷಣ ಮಾಡುವಾಗಗ ಮೀನುಗಾರರು ವಿರೋಧ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ರಾಜಕೀಯ ಭಾಷಣ ಮಾಡಬಾರದು ಎಂದು ಆಕ್ಷೇಪಿಸಿದರು.

ರಮೇಶ್ ಕಾಂಚನ್ ತಮ್ಮ ಭಾಷಣದಲ್ಲಿ ಪ್ರಮೋದ್ ಮಧ್ವರಾಜ್‌ಗೆ ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ಮೀನುಗಾರರ ಆಕ್ರೋಶ ವ್ಯಕ್ತಪಡಿಸಿದರು. ರಮೇಶ್ ಕಾಂಚನ್ ಭಾಷಣ ನಿಲ್ಲಿಸದಿದ್ದಾಗ, ಮೀನುಗಾರರು ವೇದಿಕೆಯತ್ತ ನುಗ್ಗಲು ಪ್ರಯತ್ನಿಸಿದರು. ಬಂಧಿತ ಮೀನುಗಾರ ಮಹಿಳೆಯರು ಜೈಲಿನಲ್ಲಿದ್ದಾರೆ. ಈ ಸಂದರ್ಭದಲ್ಲಿ ರಾಜಕೀಯ ಮಾತನಾಡಬೇಡಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನಾಕಾರರನ್ನು ತಡೆಯಲು ಮುಖಂಡರು ಹರಸಾಹಸ ಪಡಬೇಕಾಯಿತು. ನಂತರ, ಪೊಲೀಸ್ ಭದ್ರತೆಯಲ್ಲಿ ರಮೇಶ್ ಕಾಂಚನ್ ಅವರು ಸಭೆಯಿಂದ ನಿರ್ಗಮಿಸಿದರು.

ಮಲ್ಪೆ ಬಂದರಿನ ಬಗ್ಗೆ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಸಾವಿರಾರು ಮೀನುಗಾರರು ಮೀನುಗಾರಿಕೆಗೆ ರಜೆ ಹಾಕಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Related posts

ಮೀನು ಸಾಗಾಟದ ಲಾರಿಗೆ ದುಷ್ಕರ್ಮಿಗಳಿಂದ ಕಲ್ಲು- ದೂರು ದಾಖಲು

ಮೇ 5ರಿಂದ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಗಳ ಸಮೀಕ್ಷೆ – ಜಿಲ್ಲಾಧಿಕಾರಿ

ಎಸ್‌ಎಸ್‌ಎಲ್‌ಸಿ ಫಲಿತಾಂಶ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಅಗ್ರಸ್ಥಾನ : ಯಶ್‌ಪಾಲ್ ಸುವರ್ಣ ಅಭಿನಂದನೆ