ಉಡುಪಿ : ಮಲ್ಪೆಯಲ್ಲಿ ಮೀನು ಕದ್ದ ಅರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣವನ್ನು ಉಡುಪಿ ಜಿಲ್ಲಾಧಿಕಾರಿ ಖಂಡಿಸಿದ್ದಾರೆ.
ಈ ಕುರಿತು ಮಾತನಾಡಿದ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಸಣ್ಣ ತಪ್ಪು ಮಾಡಿದ್ದಕ್ಕೆ ಈ ರೀತಿ ಹಲ್ಲೆ ಮಾಡಿರೋದು ತಪ್ಪು.
ಹಲ್ಲೆ ನಡೆಸುವವರು ಒಂದು ಕಡೆಯಾದ್ರೆ, ಉಳಿದವರು ನಗುತ್ತ ನಿಂತಿದ್ದರು. ಯಾರು ಕೂಡ ಹಲ್ಲೆ ತಡೆಯುವ ಪ್ರಯತ್ನ ಮಾಡಲಿಲ್ಲ.
ಜನರ ಮನಸ್ಥಿತಿ ಈ ರೀತಿಯಾದರೆ ಕಷ್ಟ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಯಾರಿಗೋ ಒಬ್ಬರಿಗೆ ಹಿಂಸೆಯಾಗುವಾಗ ನಾವು ನಗುವುದು ತಪ್ಪು ಎಂದಿರುವ ಡಿಸಿ, ನಾವು ಎತ್ತ ಸಾಗುತ್ತಿದ್ದೇವೆ ಎಂಬ ಪ್ರಶ್ನೆ ಕಾಡುತ್ತದೆ. ಈಗಾಗಲೇ ಉಡುಪಿ ಎಸ್ಪಿಯವರಿಗೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲು ಸೂಚಿಸಿದ್ದೇನೆ. ಇನ್ನೊಂದು ಬಾರಿ ಇಂತಹ ಘಟನೆ ಮರುಕಳಿಸಬಾರದು ಎಂದು ಹೇಳಿದ್ದಾರೆ.