ಮನೆ ಕುಸಿದು ಬಿದ್ದು ಮಹಿಳೆ ಸಾವು

ಮೂಡುಬಿದಿರೆ : ಭಾರೀ ಮಳೆಯಿಂದ ಮನೆಯೊಂದು ಸಂಪೂರ್ಣ ಕುಸಿದು ಬಿದ್ದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋರುಗುಡ್ಡೆಯ ಜನತಾ ಕಾಲನಿಯಲ್ಲಿ ಬುಧವಾರ ರಾತ್ರಿ ನಡೆದಿದೆ.

ಮೃತಪಟ್ಟ ಮಹಿಳೆಯನ್ನು ಗೋಪಿ (68) ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಗೋಪಿ ಅವರ ಮನೆ ಕುಸಿದು ಬಿದ್ದಿದ್ದು ಈ ಸಂದರ್ಭದಲ್ಲಿ ಗೋಪಿ ಅವರು ಗಾಯಗೊಂಡಿದ್ದರು. ಮನೆಯಲ್ಲಿದ್ದ ಅವರ ಮಕ್ಕಳೆಲ್ಲಾ ಅಪಾಯದಿಂದ ಪಾರಾಗಿದ್ದಾರೆ.

ಗಾಯಗೊಂಡಿದ್ದ ಗೋಪಿ ಅವರನ್ನು ಪಂಚಾಯತ್ ಅಧ್ಯಕ್ಷ ಉದಯ ಪೂಜಾರಿ, ಮಾಜಿ ಅಧ್ಯಕ್ಷ ಜಯಂತ ಹೆಗ್ಡೆ ಸಹಿತ ಕೆಲವರು ಹೊಸ್ಮಾರಿನ ಕ್ಲಿನಿಕ್‌‌ನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಕಾರ್ಕಳದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಶಾಸಕ ಉಮಾನಾಥ ಕೋಟ್ಯಾನ್, ತಹಶಿಲ್ದಾರ್ ಪ್ರದೀಪ್ ಕುರ್ಡೇಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ