ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆ: ಆರ್‌ಪಿಎಫ್‌ನ ಮಹಿಳಾ ಸಿಬ್ಬಂದಿಯಿಂದ ರಕ್ಷಣೆ

ಉಡುಪಿ : ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯನ್ನು ಆರ್‌ಪಿಎಫ್ ಮಹಿಳಾ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಉಡುಪಿ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದೆ.

ಶುಕ್ರವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಮಂಗಳೂರು ಮಡ್ಗಾಂವ್ ಪ್ಯಾಸೆಂಜರ್ ರೈಲು ಹತ್ತುವ ವೇಳೆ ಮಹಿಳೆ ಆಯತಪ್ಪಿ ಬಿದ್ದಿದ್ದರು. ತಕ್ಷಣವೇ ಸಮಯೋಚಿತ ಕಾರ್ಯಾಚರಣೆ ನಡೆಸಿದ ಆರ್‌ಪಿ‌ಎಫ್ ಸಿಬ್ಬಂದಿ ಅರ್ಪಣಾ ಅವರು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಮಹಿಳಾ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ರೈಲ್ವೆ ಮಹಿಳಾ ಪ್ಯಾಸೆಂಜರ್ ಅಪಾಯದಿಂದ ಪಾರಾಗಿದ್ದಾರೆ.

ಆರ್‌ಪಿ‌ಎಫ್ ಸಿಬ್ಬಂದಿ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ