ಕೊಡಂಕೂರಿನಿಂದ ಮಹಿಳೆ ನಾಪತ್ತೆ

ಉಡುಪಿ : ದಾವಣಗೆರೆ ಜಿಲ್ಲೆಯ ಹರಿಹರ ನಿವಾಸಿಯಾದ ಪ್ರಸ್ತುತ ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ಒಂದನೇ ಕ್ರಾಸ್‌ನ ನ್ಯೂ ಕಾಲೋನಿ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಅಂಜುಬಾನು (28) ಎಂಬ ಮಹಿಳೆಯು ಆಗಸ್ಟ್ 23‌ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 3 ಇಂಚು ಎತ್ತರ, ಉದ್ದಮುಖ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಉರ್ದು ಭಾಷೆ ಮಾತನಾಡುತ್ತಾರೆ.

ಈ ಮಹಿಳೆಯ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ