ಮಲ್ಪೆ : ಮಲ್ಪೆಯಲ್ಲಿ ಮಹಿಳೆಯನ್ನು ಕಟ್ಟಿ ಹಾಕಿ ಥಳಿಸಿದ ಪ್ರಕರಣದ ತನಿಖೆ ಮುಂದುವರಿದಿದ್ದು, ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಲೀಲಾ ಮತ್ತು ಪಾರ್ವತಿ ಬಂಧಿತರು.
ಈ ಪ್ರಕರಣದಲ್ಲಿ ಒಂದು ಮಹಿಳೆ ಮೇಲೆ ನಡೆದಿರುವ ಅಮಾನುಷ ಕೃತ್ಯವನ್ನು ರಾಜ್ಯ ಮಹಿಳಾ ಆಯೋಗವು ತೀವ್ರವಾಗಿ ಖಂಡಿಸಿದ್ದು ಪ್ರಕರಣಕ್ಕೆ ಕಾರಣಕರ್ತರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಕೈಗೊಂಡ ಕ್ರಮದ ಸಮಗ್ರ ವರದಿಯನ್ನು ಅತೀ ಶೀಘ್ರದಲ್ಲಿ ಆಯೋಗಕ್ಕೆ ಸಲ್ಲಿಸುವಂತೆ ತಿಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಮಲ್ಪೆ ಹಲ್ಲೆ ಪ್ರಕರಣದ ಕುರಿತು ಸರಿಯಾಗಿ ಮಾಹಿತಿ ಸಂಗ್ರಹಿಸದ ಕಾರಣ ಮಲ್ಪೆ ಪೊಲೀಸ್ ಠಾಣೆಯ ಬೀಟ್ ಕಾನ್‌ಸ್ಟೇಬಲ್‌ಗಳನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.