ಮಹಿಳೆ ಸಾವು : ಟೆಂಪೋ ಚಾಲಕನಿಗೆ 9 ತಿಂಗಳ ಜೈಲು

ಮಂಗಳೂರು : ಅಪಘಾತದಲ್ಲಿ ಮಹಿಳೆಯ ಸಾವಿಗೆ ಕಾರಣನಾದ ಗೂಡ್ಸ್ ಟೆಂಪೋ ಚಾಲಕ ಸಿದ್ದಲಿಂಗನ ಗೌಡ ವಿ. ಪೊಲೀಸ್ ಪಾಟೀಲ್(35) ಎಂಬಾತನಿಗೆ 9 ತಿಂಗಳು ಜೈಲು ಶಿಕ್ಷೆ ಹಾಗೂ 9 ಸಾವಿರ ರೂ. ದಂಡ ವಿಧಿಸಿ ಜೆಎಂಎಫ್‌ಸಿ 3ನೇ ನ್ಯಾಯಾಲಯ ಆದೇಶ ನೀಡಿದೆ.

2019ರ ಡಿ.1ರಂದು ನಗರದ ಕದ್ರಿ ಕಂಬಳ ಎಂಬಲ್ಲಿ ವಿನೋದ್ ಕುಮಾರ್ ಚಲಾಯಿಸುತ್ತಿದ್ದ ಆಟೋದಲ್ಲಿ ಶೈಲಜಾ ರಾವ್(55) ಪ್ರಯಾಣಿಸುತ್ತಿದ್ದರು. ಆಗ ಸಿದ್ದಲಿಂಗನ ಗೌಡ ಗೂಡ್ಸ್ ಟೆಂಪೋವನ್ನು ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಬಂದು ಆಟೋಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಶೈಲಜಾ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯವಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಆಟೋ ಚಾಲಕ ವಿನೋದ್ ತಲೆಗೂ ಗಂಭೀರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಈ ಬಗ್ಗೆ ಸಂಚಾರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗ ಪೊಲೀಸ್‌ ನಿರೀಕ್ಷರಾಗಿದ್ದ ಗೋಪಾಲಕೃಷ್ಣ ಭಟ್ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

Related posts

ಸಂಗಮ ಬ್ರಿಡ್ಜ್ ಬಳಿ ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ನಿವೃತ್ತ ಸರಕಾರಿ ನೌಕರರ ವೇತನ ನಷ್ಟದ ಬೇಡಿಕೆಗೆ ಪೂರಕ ಸ್ಪಂದನೆ; ಎಂಎಲ್‌ಸಿ ಐವನ್ ಡಿಸೋಜ ಜತೆಗೆ ನಿಯೋಗ ಸಿಎಂ ಭೇಟಿ

ಬೈಕ್ ಸ್ಕಿಡ್ ಆಗಿ ಸವಾರ ಮೃತ್ಯು