ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ – ಕಿಶೋರ್ ಕುಮಾರ್

ಕೋಟ ಶ್ರೀ‌ನಿವಾಸ್ ಪೂಜಾರಿ ಅವರಿಂದ ತೆರವಾಗಿರುವ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು ಮಂಗಳೂರು ನಗರ ಉತ್ತರ ಮಂಡಲ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತೀಯ ಜನತಾ ಪಾರ್ಟಿಗೆ ಪಕ್ಷದ ನಿಸ್ವಾರ್ಥ ಕಾರ್ಯಕರ್ತರೇ ಶಕ್ತಿ. ಪಕ್ಷದ ಗೆಲುವಿಗಾಗಿ ಹಗಲಿರುಳೆನ್ನದೆ ಶ್ರಮಿಸುವ ಕಾರ್ಯಕರ್ತರಿಂದಾಗಿ ಪಕ್ಷವು ಇಂದು ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷವಾಗಿ ಗುರುತಿಸಿಕೊಂಡಿದೆ. ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲೂ ಬಿಜೆಪಿ ಅಭೂತಪೂರ್ವ ಗೆಲುವು ದಾಖಲಿಸಲಿದೆ ಎಂದು ಹೇಳಿದರು.

ಬಳಿಕ ಮಾತನಾಡಿದ ಬಿಜೆಪಿ ಜಿಲ್ಲಾದ್ಯಕ್ಷ ಸತೀಶ್ ಕುಂಪಲ, ಚುನಾವಣೆಯ ದೃಷ್ಟಿಯಿಂದ ಪಕ್ಷದ ಕಾರ್ಯಕರ್ತರು ಸಮರೋಪಾದಿಯಲ್ಲಿ ಚುನಾವಣಾ ಚಟುವಟಿಕೆಯಲ್ಲಿ ಭಾಗವಹಿಸಬೇಕು. ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಅವರ ಗೆಲುವಿನ ಅಂತರವನ್ನು ಹೆಚ್ಚಿಸಲು ಚುನಾವಣೆಯ ವರೆಗೂ ಅವಿಶ್ರಾಂತವಾಗಿ ಕಾರ್ಯ ನಿರತರಾಗಬೇಕೆಂದು ಕರೆ ನೀಡಿದರು.

ಸಭೆಯಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ಡಾ. ಭರತ್ ಶೆಟ್ಟಿ ವೈ, ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಆರ್ವಾರ್ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ