ಪರ್ಯಾಯ ಪುತ್ತಿಗೆ ಶ್ರೀಗಳ ಆಶೀರ್ವಾದ ಪಡೆದ ಯಕ್ಷಗಾನ ಅಕಾಡೆಮಿ ನೂತನ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ

ಉಡುಪಿ : ಕರ್ನಾಟಕ ಸರಕಾರದ ಕರ್ನಾಟಕ ಯಕ್ಷಗಾನ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಡಾ. ತಲ್ಲೂರು ಶಿವರಾಮ ಶೆಟ್ಟಿಯವರು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆಯನ್ನು ಗೀತಾ ಮಂದಿರದಲ್ಲಿ ಪಡೆದುಕೊಂಡರು.

ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಅನುಗ್ರಹ ಮಂತ್ರಾಕ್ಷತೆ ನೀಡಿ ತಮ್ಮಿಂದ ಉತ್ತಮ ಕೆಲಸ ಕಾರ್ಯಗಳು ಆಗಲಿ ಎಂದು ಹರಸಿದರು.

ಈ ಸಂದರ್ಭದಲ್ಲಿ ಮಠದ ಶ್ರೀ ರಮೇಶ್ ಭಟ್, ಶ್ರೀ ಪಾಡಿಗಾರು ಲಕ್ಷ್ಮೀ ನಾರಾಯಣ ಉಪಾಧ್ಯ, ಹಾಗೂ ಶ್ರೀ ಸುಬ್ರಹ್ಮಣ್ಯ ಬೈಪಡಿತ್ತಾಯ ಉಪಸ್ಥಿತರಿದ್ದರು.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ