ಕಲಾವಿದರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ

ಉಡುಪಿ : ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭವು ಸಂಸ್ಥೆಯ ಐವೈಸಿ ಸಭಾಂಗಣದಲ್ಲಿ ಜರಗಿತು.
ಯಕ್ಷಗಾನ ಲೋಕ ಶಿಕ್ಷಣವನ್ನು ಕೊಡುವ ಶ್ರೇಷ್ಠವಾದ ಕಲಾಪ್ರಕಾರವೆಂದು ಪ್ರಶಸ್ತಿ ಪ್ರದಾನ ಮಾಡಿ ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ತಮ್ಮ ಅನುಗ್ರಹ ಸಂದೇಶದಲ್ಲಿ ನುಡಿದರು.

ಶಾಸಕ ಯಶ್‍ಪಾಲ್ ಸುವರ್ಣರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಕಲಾವಿದರಾದ ಎಚ್. ನಾರಾಯಣ ಶೆಟ್ಟಿ ಕೊಳ್ಕೆಬೈಲ್, ದೇವದಾಸ ರಾವ್ ಕೂಡ್ಲಿ, ಸುರೇಶ ಕುಪ್ಪೆ ಪದವು, ಪುರಂದರ ಹೆಗಡೆ ನಾಗರಕೊಡಿಗೆ, ಗುಂಡಿಬೈಲ್ ನಾರಾಯಣ ಭಟ್, ಸರಪಾಡಿ ಅಶೋಕ ಶೆಟ್ಟಿ, ಕಿಗ್ಗ ಹಿರಿಯಣ್ಣ ಆಚಾರ್ಯ, ಥಂಡಿಮನೆ ಶ್ರೀಪಾದ ಭಟ್, ಮೊಗೆಬೆಟ್ಟು ಹೆರಿಯ ನಾಯ್ಕ್, ತೊಡಿಕ್ಕಾನ ಕೆ. ಬಾಬು ಗೌಡ, ಹಾಲಾಡಿ ಕೃಷ್ಣ ಮರಕಾಲ, ಚಕ್ರಮೈದಾನ ಕೃಷ್ಣ ಪೂಜರಿ, ಹಾವಂಜೆ ಮಂಜುನಾಥ ರಾವ್, ಹೆರಂಜಾಲು ಗೋಪಾಲ್ ಗಾಣಿಗ, ಚೇರ್ಕಾಡಿ ರಾಧಾಕೃಷ್ಣ ನಾೈಕ್, ಶೇಣಿ ಸುಬ್ರಹ್ಮಣ್ಯ ಭಟ್, ಸರಪಾಡಿ ಶಂಕರನಾರಾಯಣ, ಹೊಡಬಟ್ಟೆ ವೆಂಕಟ ರಾವ್, ಕಟೀಲು ರಮಾನಂದ ರಾವ್, ನರಸಿಂಹ ಮಡಿವಾಳ, ಎಲ್ಲೂರು ಕೆ. ಶ್ರೀನಿವಾಸ ಉಪಾಧ್ಯಾಯ, ಅಂಬಾಪ್ರಸಾದ ಪಾತಾಳ, ಗಜಾನನ ಸತ್ಯನಾರಾಯಣ ಭಂಡಾರಿ ಸಹಿತ 23 ಕಲಾವಿದರನ್ನು ತಲಾ ರೂ. 20 ಸಾವಿರ ನಗದು ಸಹಿತ ಫಲಕ ನೀಡಿ ಸನ್ಮಾನಿಸಲಾಯಿತು.
ಯಶಸ್ವಿ ಕಲಾವೃಂದ (ರಿ.) ಕೊಮೆ, ತೆಕ್ಕಟ್ಟೆ ಸಂಸ್ಥೆಗೆ ಶ್ರೀ ವಿಶ್ವೇಶತೀರ್ಥ ಯಕ್ಷಗಾನ ಕಲಾರಂಗ ಪ್ರಶಸ್ತಿ ರೂ. 1,00,000/- ಮತ್ತು ಫಲಕವನ್ನು ನೀಡಿ ಗೌರವಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಮಲ್ಯಾಡಿ ಸೀತಾಮ ಶೆಟ್ಟಿಯವರು ಪ್ರಶಸ್ತಿ ಸ್ವೀಕರಿಸಿದರು.

Related posts

ಕೇರಳಕ್ಕೆ ವಿದ್ಯುತ್ ಸರಬರಾಜು ಕಾಮಗಾರಿಗೆ ವಿರೋಧ – ಬರಿಗೈಯಲ್ಲಿ ವಾಪಾಸಾದ ಅಧಿಕಾರಿಗಳು

ಹಿರಿಯ ಭಾಗವತ ಬಾಳೆಹದ್ದ ಕೃಷ್ಣ ಹೆಗಡೆ ನಿಧನ

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ 125ನೇ ಗ್ರಂಥಾಲಯ! ಗಮನ ಸೆಳೆದ ಕಸಾಪ ಅಭಿಯಾನ