ಯಕ್ಷದ್ರುವ ಪಟ್ಲ ಫೌಂಡೇಶನ್ ವತಿಯಿಂದ ಯಕ್ಷಗುರು ಕಾಂತಾವರ ಮಹಾವೀರ ಪಾಂಡಿಯವರಿಗೆ ಕಲಾಗೌರವ ಪುರಸ್ಕಾರ

ಕಾರ್ಕಳ : ಮಂಗಳೂರಿನ ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನವರು ಕೊಡಮಾಡಿದ ಪಟ್ಲ ಸಂಭ್ರಮದ 2024‌ರ ಸಾಲಿನ ಕಲಾ ಗೌರವ ಪುರಸ್ಕಾರವನ್ನು ಕಳೆದ ಮೇ 26‌ರಂದು ಅಡ್ಯಾರ್ ಗಾರ್ಡನ್‌ನಲ್ಲಿ ಪುತ್ತೂರು ಡಾ. ಶ್ರೀಧರ ಭಂಡಾರಿ‌ಯವರ ಸ್ಮರಣಾರ್ಥ ಗಣ್ಯರ ಸಮಕ್ಷಮ ಯಕ್ಷಗಾನ ಗುರು ಕಾಂತಾವರ ಮಹಾವೀರ ಪಾಂಡಿಯವರಿಗೆ ನೀಡಲಾಯಿತು.

ಟ್ರಸ್ಟ್‌ನ ಸ್ಥಾಪಕಾಧ್ಯಕ್ಷರು ಪಟ್ಲ ಸತೀಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ, ಶ್ರೀಮತಿ ಉಷಾ ಶ್ರೀಧರ ಭಂಡಾರಿ, ದೇವಿಪ್ರಸಾದ್ ಇತರರು ಉಪಸ್ಥಿತರಿದ್ದರು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಪ್ರಥಮ ಬಾರಿಗೆ ಯಕ್ಷ ರಂಗದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ