ಬಿಜೆಪಿ ಸದಸ್ಯತಾ ಅಭಿಯಾನದಲ್ಲಿ ಮುಂಚೂಣಿ ಸ್ಥಾನ ಪಡೆಯಲು ಯಶ್ಪಾಲ್ ಸುವರ್ಣ ಕರೆ

ಸೆ.2ರಂದು ಪ್ರಾರಂಭಗೊಳ್ಳಲಿರುವ ‘ಬಿಜೆಪಿ ಸದಸ್ಯತಾ ಅಭಿಯಾನ’ದಲ್ಲಿ ಪಕ್ಷದ ಪ್ರಮುಖರು, ಮಂಡಲ, ಮೋರ್ಚಾ ಸಹಿತ ಎಲ್ಲಾ ಸ್ಥರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿ, ಸದಸ್ಯತನ ನೊಂದಾವಣೆಯಲ್ಲಿ ಉಡುಪಿ ನಗರ ಮಂಡಲ ರಾಜ್ಯದಲ್ಲೇ ಮುಂಚೂಣಿ ಸ್ಥಾನ ಪಡೆಯುವಂತೆ ಸಂಘಟಿತ ಶ್ರಮ ವಹಿಸಬೇಕು ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಕರೆ ನೀಡಿದರು.

ಅವರು ಬಿಜೆಪಿ ಉಡುಪಿ ನಗರ ಮಂಡಲ ವತಿಯಿಂದ ನಗರ ಮಂಡಲಾಧ್ಯಕ್ಷ ದಿನೇಶ್ ಅಮೀನ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಸದಸ್ಯತಾ ಅಭಿಯಾನದ ಮಾಹಿತಿ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದರು.

ಸೆ.2ರಂದು 8800002024ಕ್ಕೆ ಮಿಸ್ಡ್ ಕಾಲ್ ನೀಡುವ ಮೂಲಕ ಸ್ವಯಂ ಸದಸ್ಯತನ ಪಡೆದು, ಬಳಿಕ 18 ವರ್ಷ ಮೇಲ್ಪಟ್ಟ ಕುಟುಂಬದ ಸದಸ್ಯರು ಮತ್ತು ಪರಿಸರದ ಹಿತೈಷಿಗಳನ್ನು ಗರಿಷ್ಠ ಸಂಖ್ಯೆಯಲ್ಲಿ ನೊಂದಾಯಿಸಿ ಅಭಿಯಾನವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದರು.

ಸೆ.1ರಂದು ಬಿಜೆಪಿ ಉಡುಪಿ ವಿಧಾನಸಭಾ ಕ್ಷೇತ್ರದ ವತಿಯಿಂದ ನೂತನ ಸಂಸದರು, ವಿಧಾನ ಪರಿಷತ್ ಸದಸ್ಯರು ಹಾಗೂ ಉಡುಪಿ ನಗರಸಭಾ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಅಭಿನಂದನಾ ಸಮಾರಂಭವು ಬ್ರಹ್ಮಾವರದ ಶ್ರೀ ನಾರಾಯಣ ಗುರು ಸಭಾಭವನದಲ್ಲಿ
ನಡೆಯಲಿದ್ದು ಪಕ್ಷದ ಪ್ರಮುಖರು, ಎಲ್ಲಾ ಸ್ಥರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಮತ್ತು ಪಕ್ಷದ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ವಿನಂತಿಸಿದರು.

ಬಿಜೆಪಿ ಸದಸ್ಯತಾ ಅಭಿಯಾನದ ಜಿಲ್ಲಾ ಸಂಚಾಲಕ ಮಟ್ಟಾರ್ ರತ್ನಾಕರ ಹೆಗ್ದೆ ಮತ್ತು ಅಭಿಯಾನದ ಜಿಲ್ಲಾ ಪ್ರಮುಖ್ ದಿನಕರ ಶೆಟ್ಟಿ ಹೆರ್ಗ ಸದಸ್ಯತಾ ಅಭಿಯಾನದ ಕುರಿತು ವಿಸ್ತೃತ ಮಾಹಿತಿ ನೀಡಿ, ಪಕ್ಷದ ಕೆಲಸಕ್ಕೆ ಸಮಯವನ್ನು ನೀಡಿ ಎಲ್ಲರನ್ನೂ ಜೋಡಿಸಿಕೊಂಡು ದಾಖಲೆ ಮಟ್ಟದಲ್ಲಿ ಸದಸ್ಯತನವನ್ನು ನೊಂದಾಯಿಸಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದರು.

ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್ ನಗರಸಭಾ ವಾರ್ಡ್ ಮತ್ತು ಗ್ರಾಮ ಪಂಚಾಯತ್ ಶಹ ಜವಾಬ್ದಾರಿಯ ಯಾದಿಯನ್ನು ಬಿಡುಗಡೆಗೊಳಿಸಿ, ವಾರ್ಡ್ ಮತ್ತು ಬೂತ್ ಸಭೆಗಳನ್ನು ನಡೆಸಿ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ವಿನಂತಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಸದಸ್ಯತಾ ಅಭಿಯಾನದ ಉಡುಪಿ ನಗರ ಸಹ ಸಂಚಾಲಕ ಶ್ರೀನಿಧಿ ಹೆಗ್ದೆ, ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಿ. ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ದೆ, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ವಿಜಯ ಕೊಡವೂರು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಅಭಿಯಾನದ ಜಿಲ್ಲಾ ಪ್ರಮುಖ್ ಗಿರೀಶ್ ಎಮ್. ಅಂಚನ್, ನಗರ ಸಹ ಸಂಚಾಲಕ ಕಿಶೋರ್ ಕರಂಬಳ್ಳಿ, ಉಡುಪಿ ನಗರಸಭಾ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ನಗರ ಯುವ ಮೋರ್ಚಾ ಅಧ್ಯಕ್ಷ ಶ್ರೀವತ್ಸ, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು, ಎಸ್.ಟಿ. ಮೋರ್ಚಾ ಅಧ್ಯಕ್ಷೆ ಸುಮಾ ನಾಯ್ಕ್, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಡೇನಿಸ್ ಮಾಸ್ಕರೇನಸ್ ಹಾಗೂ ಪಕ್ಷದ ಪ್ರಮುಖರು, ಮಂಡಲ, ಮೋರ್ಚಾ, ಪ್ರಕೋಷ್ಠ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು, ನಗರಸಭಾ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಮತ್ತು ಕಾರ್ಯಾಗಾರದ ಅಪೇಕ್ಷಿತರು ಉಪಸ್ಥಿತರಿದ್ದರು.

ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪ್ಪೆಟ್ಟು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು