ಒಳಕಾಡು ಶಾಲೆಗೆ ಜೇನು ದಾಳಿ ಹಿನ್ನೆಲೆ ಆಸ್ಪತ್ರೆಗೆ ಭೇಟಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಶಾಸಕ ಯಶ್‌‌ಪಾಲ್ ಸುವರ್ಣ

ಉಡು ಪಿ: ಒಳಕಾಡು ಶಾಲೆಯಲ್ಲಿ ಮಂಗಳವಾರ ಜೇನು ಕಡಿತದಿಂದ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಭೇಟಿಯಾಗಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆರೋಗ್ಯ ವಿಚಾರಿಸಿದರು.

ವಿದ್ಯಾರ್ಥಿಗಳು ಚೇತರಿಸಿಗೊಳ್ಳುತ್ತಿದ್ದು, ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆ ಮಾಡುವುದಾಗಿ ವೈದ್ಯರು ಶಾಸಕರಿಗೆ ಮಾಹಿತಿ ನೀಡಿದರು.
ವಿದ್ಯಾರ್ಥಿಗಳಿಂದ ಘಟನೆಯ ಬಗ್ಗೆ ಮಾಹಿತಿ ಪಡೆದ ಶಾಸಕರು ಪೋಷಕರಿಗೆ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ನಗರಸಭಾ ಉಪಾಧ್ಯಕ್ಷರಾದ ಶ್ರೀಮತಿ ರಜನಿ ಹೆಬ್ಬಾರ್, ಶಾಲಾಭಿವೃದ್ಧಿ ಸಮಿತಿಯ ಶ್ರೀ ನಾಗಭೂಷಣ್ ಶೇಟ್, ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕರ್ನಾಟಕ ಲಲಿತ ಕಲಾ ಅಕಾಡೆಮಿಗೆ ಸಹ ಸದಸ್ಯರಾಗಿ ಆಸ್ಟ್ರೋ ಮೋಹನ್ ನೇಮಕ

ಕೆಎಂಸಿ ಉದ್ಯೋಗಿಯ ಮಾಂಗಲ್ಯ ಸರ ಎಗರಿಸಿದ ಆರೋಪಿ ಅರೆಸ್ಟ್

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ ಏಷ್ಯಾದ ಮೊದಲ ಮಾಮಾ ಅನ್ನಿ ಹೈ-ಫಿಡೆಲಿಟಿ ಬರ್ತಿಂಗ್ ಸಿಮ್ಯುಲೇಟರ್ ಪರಿಚಯ