ಕಲ್ಸಂಕ ತೋಡಿಗೆ ಸುರಕ್ಷತಾ ತಡೆಗೋಡೆ ನಿರ್ಮಿಸಲು ಅಧಿಕಾರಿಗಳಿಗೆ ಯಶ್‌ಪಾಲ್ ಸುವರ್ಣ ಸೂಚನೆ

ಉಡುಪಿ : ಕಲ್ಸಂಕದಿಂದ ಕೃಷ್ಣ ಮಠ ಪಾರ್ಕಿಂಗ್ ಸಂಪರ್ಕಿಸುವ ರಸ್ತೆಯ ಇಕ್ಕೆಲಗಳ ತೋಡಿಗೆ ತಕ್ಷಣ ಸುರಕ್ಷತಾ ತಡೆಗೋಡೆ ನಿರ್ಮಿಸಲು ಕ್ರಮ ವಹಿಸುವಂತೆ ನಗರಸಭೆ ಅಧಿಕಾರಿಗಳಿಗೆ ಶಾಸಕ ಯಶ್‌ಪಾಲ್ ಸುವರ್ಣ ಸೂಚನೆ ನೀಡಿದರು.

ಕೆಲವು ದಿನಗಳ ಹಿಂದೆ ರಿಕ್ಷಾ ತೋಡಿಗೆ ಬಿದ್ದ ಘಟನೆ ಹಿನ್ನೆಲೆಯಲ್ಲಿ ದಿನಂಪ್ರತಿ ಸಾವಿರಾರು ಮಂದಿ ಸಂಚರಿಸುವ ರಸ್ತೆ ಸಂಚಾರದ ಸುರಕ್ಷತೆ ದೃಷ್ಟಿಯಿಂದ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಶಿಥಿಲಗೊಂಡಿರುವ ತೋಡಿನ ಬದಿಗಳ ಮರು ನಿರ್ಮಾಣಕ್ಕೆ ಸಣ್ಣ ನೀರಾವರಿ ಇಲಾಖೆ ಮೂಲಕ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆಯ ಸದಸ್ಯರಾದ ಗಿರೀಶ್ ಅಂಚನ್, ಬಾಲಕೃಷ್ಣ ಶೆಟ್ಟಿ, ನಗರಸಭೆ ಎಇಇ ದುರ್ಗಾ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ