ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಯೋಗ ದಿನಾಚರಣೆ

ಕುಂದಾಪುರ : ತಲ್ಲೂರು ಫ್ಯಾಮಿಲಿ ಟ್ರಸ್ಟ್ ನಡೆಸುತ್ತಿರುವ ನಾರಾಯಣ ವಿಶೇಷ ಮಕ್ಕಳ ಶಾಲೆ ತಲ್ಲೂರು ಇಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ನಿವೃತ್ತ ಮುಖ್ಯೋಪಾಧ್ಯಾಯರು ಹಾಗೂ ಶಾಲಾ ಶಿಕ್ಷಕರಾದ ಶ್ರೀಯುತ ಮುಡೂರ್ ಮಾಸ್ಟರ್ ಅವರು ವಿದ್ಯಾರ್ಥಿಗಳಿಗೆ ಯೋಗವನ್ನು ಕಲಿಸುವುದರ ಜೊತೆಗೆ ದಿನನಿತ್ಯದ ಜೀವನದಲ್ಲಿ ಯೋಗದಿಂದಾಗುವ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು. ವಿಶೇಷ ಮಕ್ಕಳಿಗೆ ಅನ್ವಯವಾಗುವ ಆಸನಗಳ ಬಗ್ಗೆ ತಿಳಿಸಿದರು.

ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ “ಯೋಗ ಮ್ಯಾಟ್ ವಿತರಣೆ” ನಡೆಯಿತು. ಪಸ್ಟ್ ಸ್ಟೆಪ್ ಡ್ಯಾನ್ಸ್ ಸ್ಟುಡಿಯೋದ ಮಾಲಕರಾದ ಶ್ರೀಮತಿ ಅಕ್ಷತಾ ರಾವ್ ಯೋಗ ಮ್ಯಾಟ್ ವಿತರಿಸಿದರು. ನಂತರ ಅವರು ಮಾತನಾಡಿ, ಪ್ರತಿನಿತ್ಯ ಯೋಗ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ. ಎಲ್ಲರೂ ಯೋಗ ಮಾಡಿ ಆರೋಗ್ಯವಂತರಾಗಿರಬೇಕು ಎಂದು ತಿಳಿಸಿದರು.

ಫಸ್ಟ್ ಸ್ಟೆಪ್ ಡ್ಯಾನ್ಸ್ ಸ್ಟುಡಿಯೋದ ಮಿಷೇಲ್, ಶಾರದ, ನಿಲೇಶ್ ಹಾಗೂ ತಲ್ಲೂರು ಫ್ಯಾಮಿಲಿ ಟ್ರಸ್ಟ್‌ನ ಮ್ಯಾನೇಜಿಂಗ್ ಶ್ರೀ ಸುರೇಶ್. ಟಿ ಉಪಸ್ಥಿತರಿದ್ದರು.

ಸಹಶಿಕ್ಷಕಿ ಶ್ರೀಮತಿ ಶ್ರುತಿ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಪ್ರತಿಮಾ ವಂದಿಸಿದರು. ಸಹ ಶಿಕ್ಷಕಿ ಶ್ರೀಮತಿ ದೀಪಾ ಕಾರ್ಯಕ್ರಮ ನಿರೂಪಿಸಿದರು.

Related posts

ಕೋಟತಟ್ಟುವಿನಲ್ಲಿ ಹೆಜ್ಜೇನು ದಾಳಿ : ಇಬ್ಬರ ಸ್ಥಿತಿ ಗಂಭೀರ

ಬಾಕಿ ಇರುವ ಮನೆಹಾನಿ, ಬೆಳೆಹಾನಿ ಪರಿಹಾರ ತಕ್ಷಣ ವಿತರಿಸಿ – ಅಧಿಕಾರಿಗಳಿಗೆ ಎಡಿಸಿ ಸೂಚನೆ

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್