ಕಾರ್ಕಳ ಪುರಸಭೆ ಅಧ್ಯಕ್ಷರಾಗಿ ಯೋಗೀಶ್ ದೇವಾಡಿಗ, ಉಪಾಧ್ಯಕ್ಷರಾಗಿ ಪ್ರಶಾಂತ್ ಕೋಟ್ಯಾನ್ ಆಯ್ಕೆ

ಕಾರ್ಕಳ : ಕಾರ್ಕಳ ಪುರಸಭೆಯ 2ನೇ ಅವಧಿಗೆ ಅಧ್ಯಕ್ಷರಾಗಿ ಬಿಜೆಪಿಯ ಹಿರಿಯ ಸದಸ್ಯ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಯೋಗೀಶ್ ದೇವಾಡಿಗ ಹಾಗೂ ಉಪಾಧ್ಯಕ್ಷರಾಗಿ ಮೊದಲ ಬಾರಿಗೆ ಸದಸ್ಯರಾದ ಪ್ರಶಾಂತ್ ಕೋಟ್ಯಾನ್ ಅವರು ಆಯ್ಕೆಯಾಗುವ ಮೂಲಕ ಮತ್ತೊಮ್ಮೆ ಕಾರ್ಕಳ ಪುರಸಭೆ ಬಿಜೆಪಿ ತೆಕ್ಕೆಗೆ ಬಂದಿದೆ.

ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಯೋಗೀಶ್ ದೇವಾಡಿಗ 13 ಮತ ಗಳಿಸಿದರೆ ಕಾಂಗ್ರೆಸ್ ಅಭ್ಯರ್ಥಿ ಶುಭದ ರಾವ್ 11 ಮತ ಗಳಿಸಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಶಾಂತ್ ಕೋಟ್ಯಾನ್ 13
ಮತ ಗಳಿಸಿದರೆ ಕಾಂಗ್ರೆಸ್ ಅಭ್ಯರ್ಥಿ ವಿನ್ನಿ ಬೋಲ್ಡ್ ಮೆನ್ಡಾನ್ಕಾ 11 ಮತ ಗಳಿಸಿದ್ದಾರೆ.

ಕಾರ್ಕಳ ಪುರಸಭೆಯಲ್ಲಿ 23 ಸದಸ್ಯರ ಪೈಕಿ ಕಾಂಗ್ರೆಸ್ ಬಿಜೆಪಿ ತಲಾ 11 ಸದಸ್ಯ ಬಲ ಹೊಂದಿದ್ದು ಒಬ್ಬ ಪಕ್ಷೇತರ ಸದಸ್ಯರಿದ್ದಾರೆ. ಶಾಸಕ ವಿ ಸುನಿಲ್ ಕುಮಾರ್ ಹಾಗೂ ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರ ಮತಗಳು ಸೇರಿ ಬಿಜೆಪಿ ಸದಸ್ಯ ಬಲ 13ಕ್ಕೆ ಏರಿತ್ತು. ಪಕ್ಷೇತರ ಅಭ್ಯರ್ಥಿ ಲಕ್ಷ್ಮಿ ನಾರಾಯಣ ಮಲ್ಯ ಗೈರು ಹಾಜರಾಗಿದ್ದರು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !