ಯುವತಿಯ ಮೇಲೆ ಕೈ ಹಾಕಿದ ಯುವಕ ಬಂಧನ

ಮಂಗಳೂರು : ಯುವತಿಯೊಬ್ಬಳ ಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ ಆರೋಪಿ 21 ವರ್ಷದ ಅರ್ಷದ್ ಎಂಬಾತನನ್ನು ಮೂಡಬಿದಿರೆ ಪೊಲೀಸರು ಬಂಧಿಸಿದ್ದಾರೆ.

ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಮೂಡಬಿದಿರೆಯ ಪ್ರಾಂತ್ಯ ಗ್ರಾಮದ ಟೈಲರ್ ಅಂಗಡಿಯೊಂದಕ್ಕೆ ಹೋಗುತ್ತಿದ್ದಾಗ, ತನ್ನ ಕ್ಲಾಸ್‌ಮೇಟ್ ಆಗಿದ್ದ ಅರ್ಷದ್ ತನ್ನನ್ನು ಅಡ್ಡಗಟ್ಟಿ “ನೀನು ನನ್ನನ್ನು ಯಾಕೆ ಪ್ರೀತಿಸುತ್ತಿಲ್ಲ” ಎಂದು ಕೇಳಿದನು. ಆ ಬಳಿಕ ಆತ ತನ್ನ ಮೈ ಮೇಲೆ ಕೈ ಹಾಕಲು ಬಂದ ಎಂದು ಆರೋಪಿಸಿ, ಮೂಡುಬಿದಿರೆ ಠಾಣೆಗೆ ದೂರು ನೀಡಿದ್ದಾಳೆ.

ಘಟನೆ ನಡೆದಾಗ ಯುವತಿ ಬೊಬ್ಬೆ ಹೊಡೆದ ಕೂಡಲೇ ಟೈಲರ್ ಹೊರಬಂದಾಗ, ಆರೋಪಿ ಸ್ಥಳದಿಂದ ಓಡಿಹೋದನೆಂದು ದೂರಿನಲ್ಲಿ ತಿಳಿಸಲಾಗಿದೆ. ಮಹಿಳೆಯನ್ನು ಅಡ್ಡಗಟ್ಟಿ ಕಿರುಕುಳ ನೀಡಿದ ಪ್ರಕರಣದನ್ವಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮೂಲತಃ ಇರುವೈಲಿನವನಾದ ಅರ್ಷದ್, ಮೂಡುಬಿದಿರೆ ಕೊಡಂಗಲ್ಲು ಪಿಲಿಪಂಜರ ಎಂಬಲ್ಲಿದ್ದು, ಬಳಿಕ ಕೋಟೆಬಾಗಿಲಿನಲ್ಲಿ ಬಾಡಿಗೆ ಮನೆಯಲ್ಲಿರುವುದಾಗಿ ತಿಳಿದುಬಂದಿದೆ. ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ, ಕೆಲವು ಸಮಯದ ಹಿಂದೆ ಕೆಲಸ ಬಿಟ್ಟು ಮನೆಯಲ್ಲೇ ಇದ್ದು, ಗುರುವಾರ ಬಟ್ಟೆ ಹೊಲಿಸಲೆಂದು ಟೈಲರ್ ಅಂಗಡಿಗೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ.

Related posts

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ

ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಿಗೆ ಭಕ್ತರಿಂದ 1.5 ಲಕ್ಷ ಚೆಂಡು ಮಲ್ಲಿಗೆ ಸಮರ್ಪಣೆ

ಗರ್ಭಧರಿಸಿದ್ದ ಗೋವಿನ ಹತ್ಯೆಗೈದು ಕರುವನ್ನು ನದಿಗೆ ಎಸೆದ ಗೋಕಳ್ಳರು