ಅಪಾರ್ಟ್ಮೆಂಟ್‌ನ 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು

ಉಡುಪಿ : 14ನೇ ಮಹಡಿಯಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಬ್ರಹ್ಮಗಿರಿಯ ಗ್ರಾಸ್ ಲ್ಯಾಂಡ್ ದಿ ಕಾಸ್ಟ್ಲೆ ಅಪಾರ್ಟ್ಮೆಂಟ್‌ನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ.

ಮೃತ ದುರ್ದೈವಿಯನ್ನು ಲೇಕ್ ರಾಜ್ (29) ಎಂದು ಗುರುತಿಸಲಾಗಿದೆ. ಈತ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಆಯತಪ್ಪಿ 14ನೇ ಮಹಡಿಯಿಂದ ಬಿದ್ದು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ