ಮದುವೆ ನಿಶ್ಚಯವಾಗಿದ್ದ ಯುವಕ ನಾಪತ್ತೆ – ಪ್ರಕರಣ ದಾಖಲು

ಉಡುಪಿ : ನಗರದ ಬಿಲ್ಡಿಂಗ್ ಒಂದರಲ್ಲಿ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದ ದೀಪಕ್ ನಿಶಾದ್ (26) ಎಂಬ ಯುವಕ ನಾಪತ್ತೆಯಾಗಿದ್ದಾರೆ. ಇವರಿಗೆ ಮದುವೆ ನಿಶ್ಚಯವಾದ ಹಿನ್ನೆಲೆಯಲ್ಲಿ ಮದುವೆ ತಯಾರಿ ಮಾಡಿಕೊಳ್ಳುವ ಸಲುವಾಗಿ ಉಡುಪಿಯಿಂದ ತನ್ನ ಸ್ವಂತ ಊರಿಗೆ ಹೋಗುವುದಾಗಿ ತಿಳಿಸಿ ಹೋದವರು, ಈವರೆಗೂ ಊರಿಗೂ ಹೋಗದೇ, ಕೆಲಸದ ಸ್ಥಳಕ್ಕೂ ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 3 ಇಂಚು ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಹಿಂದಿ ಹಾಗೂ ಭೋಜ್‌ಪುರಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆಯ ನಂ. 9480805448 ಹಾಗೂ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444ನ್ನು ಸಂಪರ್ಕಿಸ‌ಬಹುದು ಎಂದು ಮಣಿಪಾಲ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ