ಕುಂದಾಪುರ : ಬೈಕ್ ಕದಿಯುವ ದೃಶ್ಯವೊಂದು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ರೈಲ್ವೆ ನಿಲ್ದಾಣದ ಪರಿಸರದಲ್ಲಿ ಈ ಘಟನೆ ನಡೆದಿದೆ.

ಗುರುವಾರ ಬೆಳಿಗ್ಗೆ ಯೋಗೀಶ್ ಪೂಜಾರಿ ಎಂಬವರು ತಮ್ಮ ಬೈಕನ್ನು ನಿಲ್ಲಿಸಿ ಕೆಲಸಕ್ಕೆ ಹೋಗಿದ್ದರು. ಸಂಜೆ ಕೆಲಸ ಮುಗಿಸಿ ವಾಪಸ್ ರೈಲ್ವೆ ನಿಲ್ದಾಣಕ್ಕೆ ಬಂದ ಸಂದರ್ಭ ಬೈಕ್ ಕಾಣೆಯಾಗಿದೆ. ಕೂಡಲೇ ರೈಲ್ವೆ ನಿಲ್ದಾಣದಲ್ಲಿ ಅಳವಡಿಸಲಾದ ಸಿಸಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿದಾಗ, 11 ಗಂಟೆ ಸುಮಾರಿಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಬೈಕನ್ನು ಕದಿಯುವ ದೃಶ್ಯ ದಾಖಲಾಗಿದೆ.
ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೈಕ್ ಕಳ್ಳರಿಗಾಗಿ ಪೊಲೀಸರು ಶೋಧ ಶುರು ಮಾಡಿದ್ದಾರೆ.